ಕಲಬುರ್ಗಿ: ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಅತಿಥಿ ಶಿಕ್ಷಕನೊರ್ವ ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದೆ.
ಶಿವರಾಜ ಎಂಬ ಅತಿಥಿ ಶಿಕ್ಷಕ 14 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿ. ಅದೇ ಶಾಲೆಯ ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಿಕ್ಷಕ ಈ ಕೃತ್ಯವೆಸಗಿದ್ದಾನೆ.
ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.