ಗದಗ: ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ ನಡೆಸಿ ಹೇಯ ಕೃತ್ಯ ಎಸಗಿರುವ ಘಟನೆ ಗದಗದಲ್ಲಿ ನಡೆದಿದೆ.

ಗದಗದಲ್ಲಿ ರಮೇಶ್ ಎಂಬಾತ ತನ್ನ 16 ವರ್ಷದ ಮಗಳ ಮೇಲೆ ಕಳೆದ 1 ವರ್ಷದಿಂದ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಸದ್ಯ ಈತನ ಮೇಲೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ, ಆರೋಪಿ ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.