ಬೆಳಗಾವಿ: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ ಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಸರ್ಜ ಅಂಕಲಗಿ (45) ಹೃದಯಾಘಾತದಿಂದ ಮೃತಪಟ್ಟವರು.

ಮಲ್ಲಸರ್ಜ್ ತಮ್ಮ ಕರ್ತವ್ಯ ಮುಗಿಸಿಕೊಂಡು ಶನಿವಾರ ರಾತ್ರಿ ಊಟ ಮಾಡಿ ಮಲಗಿದ್ದಾರೆ. ಬೆಳಗ್ಗೆ ತಡವಾದರೂ ಏಳದ ಅವರನ್ನು ಮನೆಯವರು ಎಬ್ಬಿಸಲು ಹೋದಾಗ ವಿಷಯ ಗೊತ್ತಾಗಿದೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ‌ನಿರ್ವಹಿಸುತ್ತಿದ್ದ ಇವರು ಎಲ್ಲ ಸಿಬ್ಬಂದಿಗಳಿಗೆ ಅಚ್ಚು ಮೆಚ್ಚಾಗಿದ್ದರು. ಅವರ ಅಕಾಲಿಕ ‌ನಿಧನಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಶೋಕ ವ್ಯಕ್ತಪಡಿಸಿದ್ದಾರೆ.