ಹುಕ್ಕೇರಿ: ಪಾಕಿಸ್ತಾನ ಹಾಗೂ ಭಾರತ ನಡುವೆ ನಡೆಯುತ್ತಿದ್ದ ಯುದ್ಧ ನಿಲ್ಲಿಸಿದ ವಿಚಾರಕ್ಕೆ ಪ್ರಧಾನಿ ಮೋದಿ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಧಾನ ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು ಯುದ್ಧವನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದಿತ್ತು. ಈ ಯುದ್ಧದಲ್ಲಿ ಪಾಕಿಸ್ತಾನವನ್ನ ನಾಶ ಮಾಡಬೇಕಿತ್ತು.ಯಾರದೋ ಮಾತು ಕೇಳಿ ಯುದ್ಧ ನಿಲ್ಲಿಸಬಾರದಿತ್ತು.

ಕದನ ವಿರಾಮದ ನಂತರ ಮತ್ತೆ ದಾಳಿ ಮಾಡಿದ್ದಾರೆ. ಬೇರೆಯವರ ಮಾತು ಕೇಳಿ ಪಾಕಿಸ್ತಾನದ ಜೊತೆ ನಡೆಸುತ್ತಿದ್ದ ಯುದ್ಧ ಕೈ ಬಿಟ್ಟಿದ್ದು ತಪ್ಪು. ಪಾಕಿಸ್ತಾನದವರು ಸಾಯುವವರೆಗೂ ವೈರಿಗಳೇ ಅವರು ಎಂದಿಗೂ ನಮಗೆ ಒಳ್ಳೆಯದು ಮಾಡಲ್ಲ. ಪಾಕ ಹಾಗೂ ಭಾರತದ ನಡುವೆ ಯುದ್ಧ ಸಂಧಾನದಲ್ಲಿ ಟ್ರಂಪ್ ಮಧ್ಯಸ್ಥಿಕೆ ವಹಿಸಲು ಅವರು ಯಾರು? ಅಮೇರಿಕಾದ ವಿಚಾರದಲ್ಲಿ ನಾವು ಏನಾದ್ರೂ ಹೇಳಿದ್ರೆ ಅವರು ಕೇಳ್ತಾರಾ..!? ಮೋದಿಯವರು ಕಠಿಣ ಹಾಗೂ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಮೋದಿ ಯುದ್ಧದ ವಿಚಾರದಲ್ಲಿ ಟ್ರಂಪ್ ಮಾತು ಕೇಳಿದ್ದು ತಪ್ಪು. ಭಯೋತ್ಪಾದಕರ ವಿಚಾರದಲ್ಲಿ ಎಲ್ಲಾ ದೇಶಗಳು ಶೃಂಗ ಸಭೆಯನ್ನ ನಡೆಸಿ ಭಯೋತ್ಪಾದಕರನ್ನ ಸ್ವಚಗೊಳಿಸಿ ನಾಶ ಮಾಡಬೇಕು ಎಂದು ಅವರು ಹೇಳಿದರು.