ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆರಾಯನ‌ ಅಬ್ಬರ ಜೋರಾಗಿದೆ.‌ಚಿಕ್ಕೋಡಿ, ಅಥಣಿ, ಹುಕ್ಕೇರಿ, ರಾಯಬಾಗ, ನಿಪ್ಪಾಣಿ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗಿದೆ. ಕಳೆದ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ.
ಭಾರಿ ಬಿರುಗಾಳಿ ಗುಡುಗು ಸಹಿತ ಸುರಿಯುತ್ತಿರುವ ಮಳೆಯಿಂದ ಪ್ರಯಾಣಿಕರ ಪರದಾಟ, ರೈತರ ಮೊಗದಲ್ಲಿ ಮೂಡಿದ ಮಂದಹಾಸ ಮೂಡಿದೆ. ಇನ್ನೂ ಅಥಣಿ ತಾಲೂಕಿನ ವಿವಿಧೆಡೆ ಸುರಿದ ಭಾರಿ ಮಳೆಗೆ ಮನೆಗಳಿಗೆ ಮಳೆ ನೀರು ನುಗ್ಗಿದೆ. ಅಥಣಿ ತಾಲೂಕಿನ ಸತ್ತಿ ಗ್ರಾಮದ ಕೆಲ ಮನೆಗಳಿಗೆ ನೀರು ನುಗ್ಗಿದೆ.