ಮೇ 23 ರಂದು ನಡೆಯಬೇಕಿದ್ದ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಹೈ-ವೋಲ್ಟೇಜ್ ಪಂದ್ಯ ಬೆಂಗಳೂರು ಬದಲಾಗಿ ಲಕ್ನೋ ದಲ್ಲಿ ನಡೆಯಲಿದೆ.
ನಿಗದಿಯಂತೆ ಈ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿತ್ತು. ಆದರೆ ಬೆಂಗಳೂರಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ.
ಹವಾಮಾನ ಇಲಾಖೆ ಮೇ 23 ರಂದು ಕೂಡ
ಬೆಂಗಳೂರಿನಲ್ಲಿ ಮಳೆ ಸುರಿಯುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಲಕ್ನೋದ ಎಕನಾ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮೇ 17 ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಕೋಲ್ಕತ್ತ ವಿರುದ್ಧ ಪಂದ್ಯವಿತ್ತು ಆದರೆ ಭಾರಿ ಮಳೆಯಿಂದ ಪಂದ್ಯ ರದ್ದಾಗಿ ಆರ್ ಸಿ ಬಿ ಅಭಿಮಾನಿಗಳಿಗೆ ನಿರಾಶೆ ಉಂಟು ಮಾಡಿತ್ತು
.

ಈ ರೀತಿ ಮತ್ತೆ ಆಗಬಾರದು ಅನ್ನೋ ಉದ್ದೇಶದಿಂದ ಬೆಂಗಳೂರಿನ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ಜೊತೆ ಬೆಂಗಳೂರು ತಂಡ ಮೇ 27 ರಂದು ಪಂದ್ಯ ನಡೆಯಲಿದೆ. ಇನ್ನು, ಐಪಿಎಲ್ ಅಂತಿಮಘಟ್ಟ ತಲುಪಿದ್ದು, ಮೇ 29 ರಿಂದ ಪ್ಲೇ-ಆಫ್ ಪಂದ್ಯಗಳು ನಡೆಯಲಿವೆ. ಜೂನ್ 3 ರಂದು ಫೈನಲ್ ಮ್ಯಾಚ್ ನಡೆಯಲಿದೆ.
