ಬೆಳಗಾವಿ: ಕಾಗವಾಡ ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಿತ್ತೂರು ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಶಾಸಕರ ಸಹೋದರನ ಮಗನ ಕಾರು ಅಪಘಾತವಾದ ಹಿನ್ನಲೆ ಬೈಕ್ ಸವಾರ ಗೋಕಾಕ್ ಮೂಲದ ಬಸವರಾಜ ಪುಡಕಲಕಟ್ಟಿ (22) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.