ರಾಜ್ಯದ ಅತಿದೊಡ್ಡ ಜಿಲ್ಲೆ ಬೆಳಗಾವಿ ಜಿಲ್ಲೆಯ ವಿಭಜನೆಗೆ ಕೂಗು ಹಲವು ವರ್ಷಗಳಿಂದ ಇದೆ. ಜಿಲ್ಲಾ ವಿಭಜನೆ ಮಾಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸಲಾಗಿತ್ತಿದ್ದು, ಸಧ್ಯ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದಾರೆ.

ಗೌರಿಬಿದನೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮತ್ತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ 31 ಜಿಲ್ಲೆಗಳ ಪೈಕಿ ಉತ್ತರ ಕರ್ನಾಟಕದ ಜಿಲ್ಲೆಗಳ ವಿಭಜನೆಯ ಕೂಗು ಹೆಚ್ಚಾಗಿದ್ದು, ಅತಿ ದೊಡ್ಡ ಜಿಲ್ಲೆ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿ, ಗೋಕಾಕ್‌ ಅಥವಾ ಬೈಲಹೊಂಗಲ ಹಾಗೂ ಬೆಳಗಾವಿ ಜಿಲ್ಲೆಗಳ ರಚನೆಗೆ ಈ ಭಾಗದ ಜನರ ಬೇಡಿಕೆಯಿದೆ.