ಅಹಮದಾಬಾದ್: ಗುಜರಾತ್’ನ ಅಹಮದಾಬಾದ್ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು, ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.

ಈ ಬಗ್ಗೆ ಸುದ್ದಿ ಸಂಸ್ಥೆ ಎಪಿ ಅಧಿಕೃತ ಮಾಹಿತಿ ನೀಡಿದೆ. ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ಪತನಗೊಂಡು ಹೊತ್ತಿ ಉರಿದಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದರು.

ಅವರಲ್ಲಿ ಭಾರತೀಯರು- 169 ಪೊರ್ಚುಗಲ್-‌ 7 ಬ್ರಿಟಿಷರು 53,  ಸಿಬ್ಬಂದಿ 12 ಮಂದಿ ಇದ್ದರು. ಈ ದುರಂತದಲ್ಲಿ ವಿಮಾನದಲ್ಲಿದ್ದ 242 ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಧೃಡಪಡಿಸಲಾಗಿದೆ.