ಬೆಳಗಾವಿ: ಶೋಕಿಗೆ ಕೈಯಲ್ಲಿ ಲಾಂಗ್ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹಾಕಿದ ಯುವಕನನ್ನು ನೇಸರಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ಮೇಕಲಮರಡಿಯ ಮುಶ್ರಫ್ಯಾನ್ ಬಂಧಿತ ವ್ಯಕ್ತಿ. ಈತ ತನ್ನ ಕೈಯಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದಲ್ಲದೆ, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ನೇಸರಗಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.