ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು.
ಪಾಠದ ಜೋತೆಗೆ ತರಕಾರಿ ಬೆಳೆಗಳನ್ನ ಬೆಳೆದ ಮಕ್ಕಳನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶ್ಲಾಘಿಸಿ ಶಾಲೆಗೆ ಎರಡು ಕಂಪ್ಯೂಟರ್ ಗಳನ್ಮು ಉಡುಗೊರೆಯಾಗಿ ನೀಡಿದರು.
ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬೆಳ್ತಂಗಡಿಯ ಕಾಂಗ್ರೆಸ್ ಯುವ ನಾಯಕ ರಕ್ಷಿತ್ ಶಿವರಾಮ್ ಹಾಗೂ ಶಾಲೆಯ ಶಿಕ್ಷಕ ವೃಂದ ಮಕ್ಕಳ ಜೊತೆಗೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.