ಅಥಣಿ: ಕಾರ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿರು ದುರ್ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇಸಾರಟ್ಟಿ ಗ್ರಾಮದ ಬಳಿ ನಡೆದಿದೆ.
ವಿಜಯಪುರ ಮೂಲದ ಕಾರ್ ಚಾಲಕ ಯಾಸೀನ್ ಇನಾಮ್ದಾರ್ (47) ಮೃತ ದುರ್ದೈವಿ. ಜೇವರ್ಗಿ-ಸಂಕೇಶ್ವರ ಹೆದ್ದಾರಿಯಲ್ಲಿ
ವಿಜಯಪುರದಿಂದ ಅಥಣಿ ಕಡೆ ತೆರಳುವ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಕಾರ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಐಗಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.