ಗೋಕಾಕ: ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ ನಗರದ ಹಿಲ್ ಗಾರ್ಡನ್ ರಸ್ತೆಯಲ್ಲಿ ನಡೆದಿದೆ.
ಪರಶುರಾಮ್ ಗೊಂಧಳಿ(26) ಹತ್ಯೆಯಾದ ಯುವಕ. ಹತ್ಯೆಯಾದ ಯುವಕ ಪರಶುರಾಮ ಗೋಕಾಕ್ ನಗರದ ಗೊಂದಳಿ ಗಲ್ಲಿ ನಿವಾಸಿಯಾಗಿದ್ದಾನೆ. ಹಳೆ ವೈಷಮ್ಯ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಯುವಕನನ್ನ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ನಡುವರಸ್ತೆಯಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಗೋಕಾಕ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶವವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋಕಾಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.