ಹುಕ್ಕೇರಿ: ಚಲಿಸುತ್ತಿರುವ ಸಾರಿಗೆ ಬಸ್’ಗೆ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ನಡೆದಿದೆ.

ಬೆಳಗಾವಿಯಿಂದ ಚಿಕ್ಕೋಡಿಗೆ ಆಗಮಿಸುತ್ತಿರುವಾಗ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ‌ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ಕೂಡಲೇ ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದಾನೆ. ಬಳಿಕ ಚಾಲಕ ತಕ್ಷಣ ಬಸ್ ನಿಂದ ಪ್ರಯಾಣಿಕರನ್ನು ಕೆಳಗಿಳಿಸಿ, ತಾನೂ ಹೊರ ಬಂದಿದ್ದು, ಭಾರಿ ಅನಾಹುತ ತಪ್ಪಿದಂತಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿ ಪ್ರಾಣಹಾನಿ ಸಂಭವಿಸಿಲ್ಲ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.